Categories
ಅರೋಗ್ಯ ಆರೋಗ್ಯ ಭಕ್ತಿ ಮಾಹಿತಿ ಸಂಗ್ರಹ

ಬಾಳೆ ಎಲೆಯ ಊಟದ ವೈಜ್ಞಾನಿಕ ಹಾಗು ಧಾರ್ಮಿಕ ಕಾರಣಗಳು..!! ತಪ್ಪದೆ ಓದಿ.

ಆಧುನಿಕ ಪದ್ಧತಿಗೆ ಒಗ್ಗಿಕೊಂಡಿರುವ ನಾವು ಕೆಲವು ಅತ್ಯುತ್ತಮ ಹಳೆಯ ಆಚಾರ ವಿಚಾರಗಳನ್ನು ಮೂಲೆಗುಂಪಾಗಿಸಿದ್ದೇವೆ, ಅವುಗಳಲ್ಲಿ ಬಾಳೆಲೆಯಲ್ಲಿ ಊಟ ಮಾಡುವ ಪದ್ಧತಿಯೂ ಒಂದು, ಹಿಂದೂ ಧರ್ಮದ ಶಾಸ್ತ್ರಗಳಲ್ಲಿ ಮತ್ತು ಸಮಾರಂಭಗಳಲ್ಲಿ ಬಾಳೆಗೆ ಮತ್ತು ಬಾಳೆ ಎಲೆಗೆ ತನ್ನದೆ ಆದ ಮಹತ್ವ ಇದೆ.

ಬಾಳೆ ಎಲೆಯ ಮೇಲೆ ಮಾಡುವ ಊಟದ ರುಚಿಯೇ ಬೇರೆ, ಅದು ಸಂಪ್ರದಾಯ ಸಹ ಹೌದು, ಹಾಗಾಗಿಯೇ ಮದುವೆ, ದೇವಾಲಯಗಳ ಪ್ರಸಾದ ಭೋಜನ,

ಅನ್ನಸಂತರ್ಪಣೆಗಳಲ್ಲಿ ಬಾಳೆ ಎಲೆಯ ಮೇಲೆ ಊಟವನ್ನು ಬಡಿಸಲಾಗುತ್ತದೆ, ಮನೆಯ ಮುಂದೆ ಮತ್ತು ಹಿತ್ತಲಿನ ತೋಟದಲ್ಲಿ ಬಾಳೆಗಿಡಗಳನ್ನು ಬೆಳೆಸುವುದು ಶುಭಕರವೆಂದು ಹೇಳಲಾಗುತ್ತದೆ.

ಬಾಳೆಎಲೆ ಊಟದಿಂದ ಕೇವಲ ಹೊಟ್ಟೆ ತುಂಬುವುದೊಂದೇ ಅಲ್ಲ, ಈ ಎಲೆಯಲ್ಲಿ ಅನೇಕ ಆರೋಗ್ಯದ ಗುಟ್ಟುಗಳಿವೆ ಮುಖ್ಯವಾದ ಲಾಭಗಳು ಇಲ್ಲಿವೆ.

ಜೀರ್ಣ ಕ್ರಿಯೆ ಉತ್ತಮ : ಬಾಳೆಎಲೆಯ ಮೇಲ್ಪದರದ ರಚನೆಯಲ್ಲಿ ಎಪಿಗಾಲ್ಸೋಕ್ಯಾಟಿಚಿನ್ ಗ್ಯಾಲೆಟ್ ಎಂಬ ಪಾಲಿಫಿನಾಲ್ ಅಂಶವಿರುತ್ತದೆ, ಬಿಸಿ ಆಹಾರ ಎಲೆಗೆ ಬಿದ್ದಾಕ್ಷಣ ಇವು ಆಹಾರದೊಂದಿಗೆ ಬೆರೆತು ನಮ್ಮ ಹೊಟ್ಟೆ ಸೇರುತ್ತವೆ, ಇದರಿಂದ ಜೀರ್ಣ ಕ್ರಿಯೆ ಚೆನ್ನಾಗಾಗುತ್ತದೆ.

ಬ್ಯಾಕ್ಟಿರಿಯಾ ನಿವಾರಕ : ಬಾಳೆಎಲೆಯ ಮೇಲೆ ಬ್ಯಾಕ್ಟೀರಿಯಾಗಳು ಬಾಳುವುದಿಲ್ಲ, ಇದರಲ್ಲಿ ಏನೇ ಆಹಾರ ಬಡಿಸಿದರೂ ಹೊಟ್ಟೆಗೆ ಹೋಗುವ ಮುನ್ನವೇ ಕೊಲ್ಲಲ್ಪಡುತ್ತವೆ, ಅದರಲ್ಲೂ ಕ್ಯಾನ್ಸರ್ ರೋಗಕ್ಕೆ ಕಾರಣವಾಗುವ ಪ್ರೀ ರ್ಯಾಡಿಕಲ್ ಎಂಬ ಜೈವಿಕ ರಾಸಾಯನಿಕಗಳನ್ನು ಇದು ದೇಹ ಸೇರಲು ಬಿಡುವುದೇ ಇಲ್ಲ.

ಬಿಳಿ ಕೂದಲಿಗೆ : ಚೆನೈನ ಆಯುರ್ವೇದ ತಜ್ಞರ ಪ್ರಕಾರ, ಸಣ್ಣ ವಯಸ್ಸಿನಲ್ಲೇ ಬಿಳಿಕೂದಲಿನ ಸಮಸ್ಯೆಯಿದ್ದವರು ನಿತ್ಯ ಬಾಳೆಎಲೆಯಲ್ಲಿ ಊಟಮಾಡಿದರೆ ಒಳ್ಳೆಯ ಫಲಿತಾಂಶ ಸಿಗುತ್ತದಂತೆ.

ವಿಶೇಷ ಸೂಚನೆ : 1. ನಾವು ಹಾಕುವಂತಹ ಪೋಸ್ಟುಗಳು ಕೇವಲ ಸಂಗ್ರಹದ ಮಾಹಿತಿ ಆಗಿರುವುದರಿಂದ ದಯವಿಟ್ಟು ಯಾವುದೇ ಕಾರಣಕ್ಕೂ ವೈದ್ಯರ ಸಲಹೆ ಸೂಚನೆಗಳನ್ನು ತೆಗೆದುಕೊಂಡೆ ಬಳಸಿ 2. ನಾವು ಹಾಕುವ ಲೇಖನಗಳು ಸಂಗ್ರಹದ ಮಾಹಿತಿ ಆಗಿರುವುದರಿಂದ ನಾವು ಯಾವುದೇ ಕಾರಣಕ್ಕೂ ಯಾವುದೇ ನಾವು ಹೇಳುವುದನ್ನು ಪಾಲನೆ ಮಾಡಿ ಅಂತ ಹೇಳುವುದಿಲ್ಲ 2. ನಾವು ಹಾಕುವ ಆರೋಗ್ಯಕ್ಕೆ ಸಂಬಂಧಪಟ್ಟ ಲೇಖನಗಳು ಕೇವಲ ಮಾಹಿತಿ ವಿನಿಮಯಕ್ಕೆ ಮಾತ್ರ ಮೀಸಲು ಆಗಿವೆ . ದಯವಿಟ್ಟು ನಿಮ್ಮ ವೈದ್ಯರ ಸಲಹೆ ಪಡೆದು ಉಪಯೋಗಿಸುವುದು ಉತ್ತಮ 3.ನಾವು ಯಾವುದೇ ವಸ್ತುಗಳನ್ನು ಸೇಲ್ ಮಾಡುವುದಿಲ್ಲ ,ನಮ್ಮ ಹೆಸರಿನಲ್ಲಿ ಯಾವುದೇ ಮೋಸ ಆದರೂ ನಾವು ಅದಕ್ಕೆ ಜವಾಬ್ದಾರರಲ್ಲ. 4.ನಮ್ಮ ಅಂತರ್ಜಾಲ ತಾಣದಲ್ಲಿ ಬರುವಂತಹ ಜಾಹಿರಾತಿಗೂ ನಮಗೂ ಯಾವುದೇ ರೀತಿಯಾದಂತಹ ಸಂಬಂಧ ಇರುವುದಿಲ್ಲ . 5. ಕೊನೆಯದಾಗಿ ನಮ್ಮ ವೆಬ್ಸೈಟಿನಲ್ಲಿ ಬರುವಂತಹ ಆರೋಗ್ಯಕ್ಕೆ ಸಂಬಂಧಪಟ್ಟಂತಹ ಲೇಖನಗಳು ಕೇವಲ ಸಂಗ್ರಹದ ಮಾಹಿತಿಯ ಆಗಿರುವುದರಿಂದ ಯಾವುದೇ ಕಾರಣಕ್ಕೂ ನಿಮ್ಮ ವೈದ್ಯರ ಸಲಹೆ ಪಡೆಯದೆ ದಯವಿಟ್ಟು ಯಾವುದನ್ನು ಕೂಡ ಉಪಯೋಗಿಸಬೇಡಿ. ಇದು ಕೇವಲ ಮಾಹಿತಿ ವಿನಿಮಯ ಹಾಗೂ ಎಜುಕೇಶನಲ್ ಪರ್ಪಸ್ ಇಂದ ಮಾಡಿರುವಂತಹ ವೆಬ್ ಸೈಟ್ ಆಗಿದೆ ನಮ್ಮಲ್ಲಿ ಪ್ರಕಟವಾಗುವ ಲೇಖನಗಳು ಎಲ್ಲಾ ಸಂಗ್ರಹದ ಮಾಹಿತಿ ಆಗಿರುವುದರಿಂದ ನಮ್ಮ ಸ್ವಂತ ಅಭಿಪ್ರಾಯ ಯಾವುದರಲ್ಲೂ ಕೂಡ ಇರುವುದಿಲ್ಲ ಆದುದರಿಂದ ಯಾವುದೇ ಭಿನ್ನಾಭಿಪ್ರಾಯ ಅಥವಾ ಯಾವುದೇ ಅನಾಹುತಗಳು ಆಗಿದ್ದಲ್ಲಿ ಅದಕ್ಕೂ ನಮಗೂ ಸಂಬಂಧವಿಲ್ಲ.  

ಅರೋಗ್ಯ : ನೀವು ತಟ್ಟೆಗಳಲ್ಲಿ ಊಟ ಮಾಡಿದರೆ ಅವುಗಳಲ್ಲಿ ಮಾರ್ಜಕದ ಕಣಗಳು ನಿಮ್ಮ ಹೊಟ್ಟೆ ಸೇರಬಹುದು, ಆದರೆ ಬಾಳೆಎಲೆಯಲ್ಲಿ ಈ ಸಮಸ್ಯೆಯೇ ಇರುವುದಿಲ್ಲ.

ಆರೋಗ್ಯಕ್ಕೆ ತಂಪು : ಬಾಳೆಎಲೆ ಊಟ ಆರೋಗ್ಯಕ್ಕೆತಂಪು, ಗ್ಯಾಸ್ ಅಡುಗೆಯಿಂದ ಆಹಾರ ಸೇರಿಕೊಳ್ಳುವ ಕೃತಕ ಉಷ್ಣವೂ ಇಲ್ಲಿ ತಣ್ಣಗಾಗುತ್ತದೆ.

ಚರ್ಮ ರೋಗ ನಿವಾರಕ : ಬಾಳೆಎಲೆಯಲ್ಲಿ ಅಧಿಕ ಪ್ರಮಾಣದ ವಿಟಮಿನ್ ಡಿ ಶೇಖರಣೆಗೊಂಡಿರುತ್ತದೆ, ಹೀಗಾಗಿ ಹಸುಗೂಸುಗಳನ್ನು ಶುಂಠಿ ಎಣ್ಣೆಲೇಪಿತ ಬಾಳೆಎಲೆಯಿಂದ ಸುತ್ತಿ ಸೂರ್ಯನ ಕಿರಣಗಳಿಗೆ ಹಿಡಿಯುತ್ತಾರೆ, ಭವಿಷ್ಯದಲ್ಲಿ ಚರ್ಮರೋಗಗಳು ಬಾರದಮತೆ ತಡೆಯುವ ವೈದ್ಯೋದ್ದೇಶ ಇದರದ್ದು, ತೆಂಗಿನೆಣ್ಣೆ ಲೇಪಿತ ಬಾಳೆಎಲೆಯನ್ನು ಸುಕ್ಕಾಗಿರುವ ಚರ್ಮದ ಸುತ್ತ ಸುತ್ತಿದರೆ ಕೆಲವೇ ದಿನಗಳಲ್ಲಿ ಒಳ್ಳೆಯ ರಿಸಲ್ಟ್ ಸಿಗುತ್ತದೆ.

ಮಕ್ಕಳ ತ್ವಚೆಗೆ ಪರಿಹಾರ : ಸೊಳ್ಳೆ ಕಚ್ಚಿ ಮಕ್ಕಳ ತ್ವಚೆಯಲ್ಲಿ ಗುಳ್ಳೆಗಳು ಉಂಟಾದರೆ ಕುಡಿ ಬಾಳೆ ಎಲೆ ರಸ, ಆಲೀವ್ ಎಣ್ಣೆ, ಸ್ವಲ್ಪ ಮೇಣ (beeswax) ಮಿಶ್ರ ಮಾಡಿ ಗುಳ್ಳೆಗಳ ಮೇಲೆ ಹಚ್ಚಿದರೆ ಆ ಗುಳ್ಳೆಗಳು ಮಾಯವಾಗುವುದು.

ಸುಟ್ಟ ಗಾಯಗಳಿಗೆ : ದೇಹದ ಮೇಲೆ ಕಂಡು ಬರುವ ಯಾವುದಾದರು ಸುಟ್ಟ ಗಾಯಗಳಿಗೆ ಶುಂಠಿ ಎಣ್ಣೆಯಲ್ಲಿ ಅದ್ದಿದ ಬಾಳೆ ಎಲೆಯನ್ನು ಹಾಕಿ ಕಟ್ಟು ಕಟ್ಟಿದರೆ ಅಥವಾ ಮುಚ್ಚಿದರೆ ಸುಟ್ಟ ಗಾಯವನ್ನು ಸಹ ಶಮನಗೊಳಿಸುತ್ತದೆ.

ಭೋಜನ ಕಾಲದಲ್ಲಿ ಬಡಿಸಲಾಗುವ ಪದಾರ್ಥಗಳು ಮತ್ತು ಅವುಗಳ ಭಗವದ್ರೂಪಗಳ ಪರಿಚಯ, ಬಡಿಸುವ ಕ್ರಮಾನುಸಾರವಾಗಿ ಭಗವಂತನ ೨೪ ನಾಮಗಳನ್ನು ಅನುಕ್ರಮವಾಗಿ ನೀಡಲಾಗಿದ್ದು ಇದೇ ಕ್ರಮವನ್ನು ಸಾಮಾನ್ಯವಾಗಿ ಅನುಸರಿಸಲಾಗುತ್ತದೆ.

1 ಉಪ್ಪು (ಸೌಗಂಧಿ ಸಹಿತ ಜನಾರ್ಧನ).

2 ಚಟ್ನಿ, ಕೋಸಂಬರಿ, ಮುಂತಾದುವು (ಸತ್ಯ ಸಹಿತ ಪ್ರದ್ಯುಮ್ನ).

3 ಕೊಬ್ಬರಿ ಬಳಸಿರುವ ಪಲ್ಯ (ಬುದ್ಧಿಸಹಿತ ಪದ್ಮನಾಭ).

4 ಸೊಪ್ಪು ಬಳಸಿರುವ ಪಲ್ಯಗಳು (ಮಂಗಳಾದೇವಿ ಸಹಿತ ಹೃಶೀಕೇಷ).

5 ಹುಳಿರಹಿತ ಪದಾರ್ಥಗಳು (ಹರಿಣಿ ಸಹಿತ ಸಂಕರ್ಷಣ).

6 ಕಟು ಅಥವಾ ಕಹಿ ಪದಾರ್ಥಗಳು (ನಿತ್ಯ ಸಹಿತ ಅನಿರುದ್ಧ).

7 ಹುಳಿ ಪದಾರ್ಥಗಳು (ಇಂದಿರಾ ಸಹಿತ ದಾಮೋದರ).

8 ಭಕ್ಷ್ಯ ಅಥವಾ ಸಿಹಿ ಪದಾರ್ಥಗಳು (ಕಮಲಾ ಸಹಿತ ಯಾಧವ).

9 ಹೋಳಿಗೆ (ಕಮಲಾಲಯ ಮಧುಸೂದನ).

10 ಗೊಜ್ಜು ಮತ್ತು ಕರಿದ ಪದಾರ್ಥಗಳು (ಸದಾಶ್ರಯ ಆಧೊಷಜ).

11 ಜಹಾಂಗೀರು, ವಡೆ ಮುಂತಾದ ಉದ್ದು ಬಳಸಿರುವ ಪದಾರ್ಥಗಳು (ಸಖಾದೇವಿ ಸಹಿತ ಆಚ್ಯುತ).

12 ಕುಂಬಳಕಾಯಿ, ಎಳ್ಳು, ಉದ್ದಿನ ಪದಾರ್ಥಗಳು-ಹಪ್ಪಳ ಸಂಡಿಗೆ ಮುಂತಾದುವು (ಲಕ್ಷ್ಮೀ ನರಸಿಂಹ).

13 ಹಣ್ಣು ಮತ್ತು ಪಾನಕಗಳು (ಸುಂದರಿ ಸಹಿತ ಉಪೇಂದ್ರ).

14 ತೊವ್ವೆ (ಧಾನ್ಯ ಸಹಿತ ಶ್ರೀಧರ).

15 ಪರಮಾನ್ನ – ಪಾಯಸ (ಲಕ್ಷ್ಮೀ ಸಹಿತ ನಾರಾಯಣ).

16 ಅನ್ನ (ಶ್ರೀಕೇಶವ).

17 ತುಪ್ಪ (ಪದ್ಮಾ ಸಹಿತ ಗೋವಿಂದ).

18 ಬೆಣ್ಣೆ (ರಮಾ ಸಹಿತ ತ್ರಿವಿಕ್ರಮ).

19 ಹಾಲು / ಕ್ಷೀರ (ಪದ್ಮಿನೀ ಸಹಿತ ಗೋವಿಂದ).

20 ಮೊಸರು (ವೃಕ್ಷಾಕಪಿ ಸಹಿತ ವಾಮನ).

21 ಕುಡಿಯುವ ನೀರು (ಶ್ರೀಕೃಷ್ಣ).

22 ಸಕ್ಕರೆ, ಬೇಳೆ (ದಕ್ಷಿಣಾ ಸಹಿತ ವಾಸುದೇವ).

23 ಶ್ಯಾವಿಗೆ, ಇಂಗು, ಏಲಕ್ಕಿ, ಕೇಸರಿ, ಕರ್ಪೂರ, ಜೀರಿಗೆ, ಮುಂತಾದುವು (ಆನಂದ ಸಹಿತ ಪುರುಷೋತ್ತಮ).

24 ವೀಳ್ಯದೆಲೆ (ಶ್ರೀಹರಿ).

25 ಪಾನಕ – ನಿಂಬೆ (ವಿಶ್ವ).

ವಿಷಯಸೂಚನೆ : ಕೆಲವು ಸಂಪ್ರದಾಯಗಳಲ್ಲಿ ತುಪ್ಪವನ್ನು ಭೋಜನಾರಂಭಕ್ಕೆ ಮುಂಚಿತವಾಗಿ ಬಡಿಸುವುದು ರೂಢಿಯಲ್ಲಿದೆ, ಈ ಕ್ರಮವನ್ನು ಪಾತ್ರಾಭಿಗಾರ ಎನ್ನುತ್ತಾರೆ, ಬಡಿಸುವವರು ಭೋಜನ ಮಾಡುವವರ ಎದುರಿನಿಂದ ಬಡಿಸಬೇಕು.